ತಾಲೂಕಿನಲ್ಲಿ ಮಿತಿಮೀರಿದ ಇಂಟರ್ ನೆಟ್ ಕೇಬಲ್ ಕಳ್ಳರ ಹಾವಳಿ: ಪದೇ ಪದೇ ಮರುಕಳಿಸುತ್ತಿರುವ ಕೇಬಲ್ ಕಳ್ಳತನ

ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಛೇಂಬರ್ ಅಳವಡಿಸಿದ್ದು, ಛೇಂಬರ್ ನಲ್ಲಿದ್ದ ಇಂಟರ್ ನೆಟ್ ಕೇಬಲ್ ನ್ನು ಕದ್ದು ಪರಾರಿಯಾಗಿರುವ ಕಳ್ಳರು.

ತಾಲೂಕಿನ ಪಾಲನಜೋಗಿಹಳ್ಳಿ ಕೆರೆ ಹತ್ತಿರದ ನರ್ಸರಿ ಬಳಿ‌ ಘಟನೆ ನಡೆದಿದ್ದು, ಕೆಲಕಾಲ ನೆಟ್ ಇಲ್ಲದೆ ಪರದಾಡಿದ ಗ್ರಾಹಕರು. ಇದರಿಂದಾಗಿ ಕಂಪನಿಗೆ ಸುಮಾರು 60 ಸಾವಿರ ರೂ. ನಷ್ಟವಾಗಿದೆ.

ಇಂತಹದ್ದೇ ಘಟನೆ ಕೆಲದಿನಗಳ ಹಿಂದೆ ನಗರದ ಕರೇನಹಳ್ಳಿ ಬಳಿಯ ಬೇಕರಿಯೊಂದರ ಬಳಿ ನಡೆದಿತ್ತು. ಅಂದು ಕಂಪನಿಗೆ ಸುಮಾರು 50ಸಾವಿರ ನಷ್ಟ ಉಂಟಾಗಿತ್ತು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಸ್ಥಳದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿದ್ದು, ಸಾರ್ವಜನಿಕರು ಭಯಭೀತಿಯಿಂದ‌ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ಹಾವಳಿಯನ್ನ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ತಾಲೂಕಿನ ಜನತೆಯ ಆಗ್ರಹ

Ramesh Babu

Journalist

Recent Posts

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

5 minutes ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

5 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

8 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago