ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಛೇಂಬರ್ ಅಳವಡಿಸಿದ್ದು, ಛೇಂಬರ್ ನಲ್ಲಿದ್ದ ಇಂಟರ್ ನೆಟ್ ಕೇಬಲ್ ನ್ನು ಕದ್ದು ಪರಾರಿಯಾಗಿರುವ ಕಳ್ಳರು.
ತಾಲೂಕಿನ ಪಾಲನಜೋಗಿಹಳ್ಳಿ ಕೆರೆ ಹತ್ತಿರದ ನರ್ಸರಿ ಬಳಿ ಘಟನೆ ನಡೆದಿದ್ದು, ಕೆಲಕಾಲ ನೆಟ್ ಇಲ್ಲದೆ ಪರದಾಡಿದ ಗ್ರಾಹಕರು. ಇದರಿಂದಾಗಿ ಕಂಪನಿಗೆ ಸುಮಾರು 60 ಸಾವಿರ ರೂ. ನಷ್ಟವಾಗಿದೆ.
ಇಂತಹದ್ದೇ ಘಟನೆ ಕೆಲದಿನಗಳ ಹಿಂದೆ ನಗರದ ಕರೇನಹಳ್ಳಿ ಬಳಿಯ ಬೇಕರಿಯೊಂದರ ಬಳಿ ನಡೆದಿತ್ತು. ಅಂದು ಕಂಪನಿಗೆ ಸುಮಾರು 50ಸಾವಿರ ನಷ್ಟ ಉಂಟಾಗಿತ್ತು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಸ್ಥಳದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿದ್ದು, ಸಾರ್ವಜನಿಕರು ಭಯಭೀತಿಯಿಂದ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ಹಾವಳಿಯನ್ನ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ತಾಲೂಕಿನ ಜನತೆಯ ಆಗ್ರಹ
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…