ತಾಲೂಕಿನಲ್ಲಿ ಮಿತಿಮೀರಿದ ಚಿರತೆ ಹಾವಳಿ: ಚಿರತೆ ದಾಳಿಗೆ ಬಲಿಯಾಗುತ್ತಲೇ ಇರುವ ಮೂಕ ಪ್ರಾಣಿಗಳು: ಕಣ್ಮುಚ್ಚಿ ಕುಳಿತ ಅಧಿಕಾರಿಗಳು: ಜೀವ ಭಯದಲ್ಲಿ ನಾಗರಿಕರು

ತಾಲೂಕಿನಲ್ಲಿ ಚಿರತೆಗಳ ದಾಳಿಗೆ ಒಂದಿಲ್ಲೊಂದು ಮೂಕ ಪ್ರಾಣಿಗಳು ಬಲಿ ಆಗುತ್ತಲೇ ಇವೆ. ಆ ಊರಲ್ಲಿ ಚಿರತೆ ದಾಳಿಗೆ ಮೇಕೆ ಬಲಿ, ಈ ಊರಲ್ಲಿ ಹಸುವನ್ನು ಬಲಿ ಪಡೆದ ಚಿರತೆ ಎಂದು ಮಾಧ್ಯಮಗಳು ವರದಿ ಮಾಡುತ್ತಲೇ ಇವೆ. ಆದರೆ, ಅರಣ್ಯ ಇಲಾಖಾಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಕಾಲಕಾಲಕ್ಕೆ ಸಂಬಳ ಎಣಿಸಿಕೊಂಡು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಅರಣ್ಯ ಇಲಾಖೆ ಬೇಜವಾಬ್ದಾರಿ ಜೊತೆಗೆ ಅರಣ್ಯ ನಾಶದಿಂದ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುತ್ತಿವೆ. ಇವುಗಳ‌ ಕಾರಣದಿಂದ ಮೂಕ ಪ್ರಾಣಿಗಳು ಬಲಿಯಾಗುತ್ತಿವೆ. ಆದರೆ, ಇದಕ್ಕೆ ಸರ್ಕಾರ ಮಾತ್ರ ಯಾವ ಕ್ರಮ ಕೈಗೊಳ್ಳದೇ ಕೈಕಟ್ಟಿ‌ ಕುಳಿತಿದೆ.

ಜು.24ರಂದು ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಗುಂಡಪ್ಪನಾಯಕನಹಳ್ಳಿಯಲ್ಲಿ ನಡೆದಿತ್ತು.

ಈ ಘಟನೆ ಮಾಸುವ ಮುನ್ನವೇ ಜು.27 ರಂದು ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನಲ್ಲಿರುವ ಮಾಡೇಶ್ವರ ಗ್ರಾಮದಲ್ಲಿ ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ.

ತಾಲೂಕಿನ ಜನ ಹೆಚ್ಚಾಗಿ ಕೃಷಿ ಹಾಗೂ ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಇದೀಗ ಕಾಡು ಪ್ರಾಣಿಗಳ ಉಪಟಳದಿಂದ ಕೃಷಿ ಹಾಗೂ ಹೈನುಗಾರಿಕೆ ಮಾಡಲು ರೈತರಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಾಣಿಗಳನ್ನು ಕಳೆದುಕೊಂಡ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಆದರೆ, ಸರ್ಕಾರದಿಂದ ಯಾವ ಪರಿಹಾರವೂ ರೈತರಿಗೆ ಸಿಗುತ್ತಿಲ್ಲ. ನಮಗೆ ಯಾವ ಪರಿಹಾರನೂ ಬೇಡ, ಅರಣ್ಯ ಇಲಾಖೆಯು ಚಿರತೆ ಹಿಡಿಯಲು ಬೋನ್‌ಗಳನ್ನು ಅಳವಡಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಂಡು ಯಾವ ಹಾನಿ ನಡೆಯದಂತೆ ನೋಡಿಕೊಂಡರೆ ಸಾಕು ಎಂದು ಗ್ರಾಮಸ್ಥರು‌ ಒತ್ತಾಯಿಸಿದ್ದಾರೆ.

ಇನ್ನಾದರೂ ನಾಡಿನಂಚಿನಲ್ಲಿರುವ ಚಿರತೆಗಳನ್ನು ಸಂಬಂಧಪಟ್ಟ ಇಲಾಖೆ ಸೆರೆ ಹಿಡಿಯುತ್ತದೆಯೇ..? ಅದೇರೀತಿ ಅರಣ್ಯ ನಾಶವಾಗದಂತೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳುತ್ತದಯೇ ಎಂದು ಕಾದು‌ ನೋಡಬೇಕಾಗಿದೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

4 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

5 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

16 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago