ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಿಂದ 16,952 ಹೆಕ್ಟೇರ್ ನಷ್ಟು ಬೆಳೆ ನಾಶವಾಗಿದೆ. ಮಳೆಯನ್ನೇ ನೆಚ್ಚಿಕೊಂಡು ರೈತರು ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ಬಾಡಿಹೋಗಿದೆ. ಆಗೊಮ್ಮೆ ಈಗೊಮ್ಮೆ ಬಿದ್ದಿದ್ದ ಮಳೆಗೆ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡ್ಮೂರು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಅದೂ ಸಹ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದೆ. ಈ ತಾಲೂಕಿನಲ್ಲಿ ಸಾಸಲು ಹೋಬಳಿ ಎಲ್ಲಾ ರೀತಿಯಲ್ಲಿ ತೀರಾ ಹಿಂದುಳಿದಿದೆ, ಆದ್ದರಿಂದ ಮೊದಲ ಆದ್ಯತೆ ಈ ಭಾಗದ ರೈತರಿಗೆ ನೀಡಬೇಕಾಗಿದೆ ಎಂದು ತಿಳಿಸಿದರು.
ನಮ್ಮ ತಾಲೂಕಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಬಳಿ ಅನುದಾನ ಬೇಕೆಂದು ನಿರಂತರವಾಗಿ ಬೇಡಿಕೆ ಇಡಲಾಗುತ್ತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(SHDP)ಗೆ 16ಕೋಟಿ 75ಲಕ್ಷ ಕೇಳಿದ್ದೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 20ಕೋಟಿ ಕೇಳಿದ್ದೆ. ನಾವು ಬೇಡಿಕೆ ಇಟ್ಟಷ್ಟು ರಾಜ್ಯ ಸರ್ಕಾರ ನೀಡಲಾಗುತ್ತಿದಿಯೇ?, ಆದ್ದರಿಂದ ತಾವು ಮೊದಲು ಬೇಡಿಕೆ ಇಟ್ಟ ಅನುದಾನಕ್ಕೆ ಸ್ಪಂದಿಸುವ ಕೆಲಸ ಮಾಡಿ ತದನಂತರ ಕೇಂದ್ರದ ಮೊರೆ ಹೋಗಬೇಕು, ಅದನ್ನ ಬಿಟ್ಟು ಕೇವಲ ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸಿದರೆ ಏನೂ ಪ್ರಯೋಜನವಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದರು.
ಮೋದಿ ಅವರು ಪ್ರಧಾನಿ ಆದ ನಂತರ ಕಿಸಾನ್ ಸಮ್ಮಾನ್, ಫಸಲ್ ಭಿಮಾ ಯೋಜನೆ ಸೇರಿದಂತೆ ಹತ್ತು ಹಲವಾರು ಜನ ಹಾಗೂ ರೈತ ಸ್ನೇಹಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ನನಗೆ ಮೋದಿ ಸರ್ಕಾರದ ಬಗ್ಗೆ ಗೊತ್ತು ಅಷ್ಟೇ ಯುಪಿಎ ಸರ್ಕಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…