ತಾಲೂಕಿನಾದ್ಯಂತ ಜೋರು ಮಳೆಯಾಗುತ್ತಿದ್ದು, ರಭಸ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನರಗನಹಳ್ಳಿಯಲ್ಲಿ ನಡೆದಿದೆ.
ಈ ವೇಳೆ ಮನೆಯಲ್ಲಿದ್ದ ತಾಯಿ-ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆನಂದಮ್ಮ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ರಾತ್ರಿಯಿಡೀ ಪಕ್ಕದ ಮನೆಯಲ್ಲಿ ವಾಸ ಮಾಡಿದ್ದಾರೆ. ಸದ್ಯ ಮನೆ ಕಳೆದುಕೊಂಡ ಆನಂದಮ್ಮ ದಿಕ್ಕು ದೋಚದ ಸ್ಥಿತಿಯಲ್ಲಿ ಇದ್ದಾರೆ. ಈ ಘಟನೆ ನಡೆದು ಹಲವು ಘಂಟೆಗಳಾದರೂ ತಾಲೂಕು ಆಡಳಿತ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.