ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.
ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ತಡರಾತ್ರಿ 11 ಗಂಟೆ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿದೆ. ವಾಹನದ ಶಬ್ಧ ಹಾಗೂ ವಾಹನದ ಬೆಳಕು ಕಾಣಿಸಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.
ಅಂತರಹಳ್ಳಿ- ಕೋಳೂರು ಸಮೀಪ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಒಬ್ಬೊಬ್ಬರೇ ಹೊಲ, ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.
ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.
ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…