ತಾಲೂಕಿನ ಅಂತರಹಳ್ಳಿ-ಕೋಳೂರು ಸಮೀಪ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು

ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ತಡರಾತ್ರಿ 11 ಗಂಟೆ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿದೆ. ವಾಹನದ ಶಬ್ಧ ಹಾಗೂ ವಾಹನದ ಬೆಳಕು ಕಾಣಿಸಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.

ಅಂತರಹಳ್ಳಿ- ಕೋಳೂರು ಸಮೀಪ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಒಬ್ಬೊಬ್ಬರೇ ಹೊಲ, ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.

ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

10 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago