ತಾಲೂಕಿನ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಗೂ ಶ್ರಮಿಸುತ್ತೇನೆ- ನೂತನ ಅಧ್ಯಕ್ಷ ವಿ.ಚುಂಚೆಗೌಡ

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು‌ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.

ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ  ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲಾಗುವುದು ಎಂದರು.

ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.

ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ನೂತನ ಸದಸ್ಯರುಗಳಾದ ರಾಮಕೃಷ್ಣಯ್ಯ.ಟಿ, ಅಂಜನಮೂರ್ತಿ, ಅಪ್ಪಿ ವೆಂಕಟೇಶ್ ಸೇರಿದಂತೆ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

40 minutes ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

2 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

12 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

12 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

15 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

17 hours ago