ನರಸಿಂಹರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ, ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಎಲ್.ಶ್ರೀಧರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
18 ಸದಸ್ಯತ್ವ ಬಲದ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ, ಉಪ ಚುನಾವಣೆ ಅಧಿಕಾರಿ ಮಲ್ಲೇಶ್ ಅವರ ಸಮ್ಮುಖದಲ್ಲಿ ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಶ್ರೀಧರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಶ್ರೀಧರ್ ಗ್ರಾಮಪಂಚಾಯಿತಿಯಲ್ಲಿ ನನ್ನ ಅಧಿಕಾರವಧಿಯಲ್ಲಿ ಜನಾನುರಾಗಿಯಾಗಿ ಕೆಲಸ ಮಾಡಲಾಗುವುದು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಪದೇ ಪದೇ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗುವುದು. ಯಾವುದೇ ಅಕ್ರಮ, ಅನ್ಯಾಯಗಳಿಗೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಣೆ ಮಾಡಲಾಗುವುದು ಎಂದರು.
ನೂತನವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶ್ರೀಧರ್ ಅವರನ್ನು ಅವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಧೀರಜ್, ಮುಖಂಡರಾದ ಸಾರಥಿ ಸತ್ಯಪ್ರಕಾಶ್, ಪುಷ್ಪಾಶಿವಶಂಕರ್, ಮಾರುತಿ, ಶರತ್ ಕುಮಾರ್, ಸಿದ್ದಗಂಗಯ್ಯ, ಮಾಜಿ ಅಧ್ಯಕ್ಷರಾದ ಜಯಮ್ಮಪ್ರಭು, ನರಸಿಂಹರಾಜು, ಸದಸ್ಯರಾದ ರಾಮಕೃಷ್ಣಪ್ಪ, ರಂಗಚಾರಿ, ಗ್ರಾಮಸ್ಥರು ಶುಭಕೋರಿದರು.