ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

53 minutes ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

1 hour ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

2 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

5 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

7 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

12 hours ago