ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾದ ವೈ.ಎನ್.ನವೀನ್ ಕುಮಾರ್

ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೇವಲ ನವೀನ್ ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಉಳಿದ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ನವೀನ್ ಕುಮಾರ್ ಅವರ ಆಯ್ಕೆಯನ್ನು ರೇಷ್ಮೆ ಸಹಾಯಕ‌ ನಿರ್ದೇಶಕರು ಹಾಗೂ ಚುನಾವಣಾಧಿಕಾರಿ ಎನ್.ಗಿರಿಜಾಂಬ ಅವರು, ಅವಿರೋಧ ಆಯ್ಕೆ ಪ್ರಕಟಿಸಿದರು.

ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 21 ಮಂದಿ ಸದಸ್ಯರಿದ್ದು, ಎಲ್ಲರೂ ಸರ್ವಾನುಮತದಿಂದ ನವೀನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.

ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ‌ ನಾಲ್ವರು, ಬಿಜೆಪಿ ಬೆಂಬಲಿತ 12 ಮಂದಿ, ಜೆಡಿಎಸ್ ಬೆಂಬಲಿತ ಮೂವರು ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಈ ಪೈಕಿ 10 ಮಂದಿ‌ ಮಹಿಳಾ ಸದಸ್ಯರೇ ಇದ್ದಾರೆ.

ನೂತನ ಅಧ್ಯಕ್ಷ ವೈ.ಎನ್.ನವೀನ್ ಕುಮಾರ್ ಮಾತನಾಡಿ, ಎಲ್ಲ ಸದಸ್ಯರು ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ‌ ಆಯ್ಕೆ‌ ಮಾಡಿದ್ದಾರೆ. ಎಲ್ಲರ ಆಶಯದಂತೆ ಹಾಗೂ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ‌ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ‌‌ ಶಾಸಕ ವೆಂಕಟಸ್ವಾಮಿ, ಬಿಜೆಪಿ‌ ಮುಖಂಡ ಅರವಿಂದ, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಶೆಟ್ಟಿಗೆರೆ ರಾಜಣ್ಣ, ಶಾಂತಕುಮಾರ್, ಚಂದ್ರಣ್ಣ, ಸತ್ಯನಾರಾಯಣಪ್ಪ, ವೆಂಕಟೇಗೌಡ, ವೆಂಕಟೇಶ್, ಮುನಿಕೃಷ್ಣಪ್ಪ, ಕೃಷ್ಣಪ್ಪ, ನಾಗಮ್ಮ ಇತರರು ನೂತನ ಅಧ್ಯಕ್ಷ ನವೀನ್ ಕುಮಾರ್ ಅವರನ್ನು ಅಭಿನಂದಿಸಿದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

21 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

22 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago