ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 85,23,744 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೋಮವಾರ ನಡೆದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಅಪಾರ ಭಕ್ತರು ಆಗಮಿಸಿದ್ದರು. ಕಳೆದ ವರ್ಷ ನ.14ರಂದು ಹುಂಡಿ ಎಣಿಕೆ ಮಾಡಲಾಗಿತ್ತು.
ಸೋಮವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 85.23 ಲಕ್ಷ ನಗದು, 11.900 ಗ್ರಾಂ ಚಿನ್ನ, 5ಕೆ.ಜಿ.50 ಗ್ರಾಂ ಬೆಳ್ಳಿ ಸಂಗ್ರಹ ಆಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣಶಾಸ್ತ್ರಿ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…