ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.
ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.
ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.
ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.
ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…