ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆ; ರಾಗಿ ಖರೀದಿ ಪ್ರಕ್ರಿಯಲ್ಲಿ ಭಾರೀ ವಿಳಂಬ; ರೈತರ ಆಕ್ರೋಶ

 

ರಾಗಿ ಖರೀದಿ ಕೇಂದ್ರದಲ್ಲಿ ಹಮಾಲಿಗಳ ಕೊರತೆಯಿಂದ ರಾಗಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿದೆ. ದಿನಗಟ್ಟಲೇ ಸರತಿ ಸಾಲಿನಲ್ಲಿ ಕಾಯುತ್ತಿರುವುದರಿಂದ ಟ್ರ್ಯಾಕ್ಟರ್ ಬಾಡಿಗೆ ದರದ ಹೊರೆ ರೈತರ ಮೇಲೆ ಬಿದ್ದಿದೆ. ಅಲ್ಲದೆ ಖರೀದಿ ಕೇಂದ್ರದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ, ಊಟದ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ರೈತರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿದ್ದಾರೆ, ತಾಲೂಕಿನಲ್ಲಿ ಸಾಸಲು ಮತ್ತು ಗುಂಡಮಗೆರೆ ಕ್ರಾಸ್ ಬಳಿ 2 ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದ್ದು. ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಖರೀದಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನ ಮಾಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ನೀರಿಲ್ಲ, ಶೌಚಾಲಯವಿಲ್ಲ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದೆ. ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ, ರಾಗಿ ಖರೀದಿ ಕೇಂದ್ರದ ಬಳಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಸಹ ಮಾಡಿಲ್ಲ, ಊಟ ತಿಂಡಿಗಾಗಿ ಒಂದರಿಂದ ಎರಡು ಕಿ.ಮೀ ದೂರ ಹೋಗಿ ಬರಬೇಕು, ಸ್ಥಳದಲ್ಲಿ ಚಿರತೆಯ ಉಪಟಳ ಸಹ ಇದೆ, ಚಿರತೆಯ ಭಯದಲ್ಲಿ ರೈತರು ರಾತ್ರಿಯ ವೇಳೆ ರಾಗಿ ಮೂಟೆಗಳನ್ನ ತುಂಬಿದ ಟ್ರ್ಯಾಕ್ಟರ್ ಗಳನ್ನ ಕಾಯಬೇಕಾದ ಪರಿಸ್ಥಿತಿ ಇದೆ.

ನೂತನ ಪದ್ಧತಿ ತಂದ ಚೀಲದ ಸಮಸ್ಯೆ

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಹೊಸ ಪದ್ದತಿಯನ್ನ ಜಾರಿ ಮಾಡಿದೆ. ರೈತರಿಂದ ಬರುವ ರಾಗಿಯನ್ನ ಸುರಿದು ಅನಂತರ ಹೊಸ ಚೀಲಗಳಿಗೆ ತುಂಬಬೇಕಿದೆ. ರೈತರ ತಂದ ಚೀಲದಿಂದ ಹೊಸ ಚೀಲಕ್ಕೆ ರಾಗಿ ತುಂಬುವುದು ರಾಗಿ ಖರೀದಿ ಪ್ರಕ್ರಿಯೆಯನ್ನೇ ನಿಧಾನವಾಗಿಸಿದೆ. ಹಮಾಲಿಗಳ ಕೊರತೆ ಇರುವುದರಿಂದ ಚೀಲ ಬದಲಾಯಿಸಲು ಸಮಯ ತೆಗೆದು ಕೊಳ್ಳುತ್ತಿದೆ. ಇದರಿಂದ ರೈತರು ಎರಡು ಮೂರು ದಿನ ಸರದಿ ಸಾಲಿನಲ್ಲೇ ಕಾಯಬೇಕು, ದಿನದ ಟ್ರ್ಯಾಕ್ಟರ್ ಬಾಡಿಗೆ ಎರಡು ಮೂರು ಸಾವಿರ ಇದ್ದು, ಎರಡು ಮೂರು ದಿನದ ಟ್ರ್ಯಾಕ್ಟರ್ ಬಾಡಿಗೆ ದರ ರೈತರ ಹೇಗಲಿಗೆ ಬಿದ್ದಿದೆ.

ರೈತರ ಅಳಲು

ಅಧಿಕಾರಿಗಳಿಗೆ ಮನವಿ ಮಾಡುತ್ತಿರುವ ರೈತರು ಚೀಲಗಳನ್ನ ಮೊದಲೇ ಕೊಟ್ಟರೆ ನಾವೇ ತುಂಬಿ ಖರೀದಿ ಕೇಂದ್ರಕ್ಕೆ ತರುತ್ತೇವೆ ಇದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಹಮಾಲಿಗಳ ಸಂಖ್ಯೆಯನ್ನ ಹೆಚ್ಚು ಮಾಡಿ ಎಂಬುದು ರೈತರ ಬೇಡಿಕೆಯಾಗಿದೆ.

ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಆದರೆ ನೀರಿನ ವ್ಯವಸ್ಥೆಯನ್ನ ಮಾಡಲಾಗಿದೆ, ಹಮಾಲಿಗಳು ಇಂದು ಬೆಳಗ್ಗೆ ತಡವಾಗಿ ಬಂದ ಕಾರಣದಿಂದ ಗೊಂದಲವಾಗಿದೆ, ಅನಂತರ ರಾಗಿ ಖರೀದಿ ಪ್ರಕ್ರಿಯೆ ಸರಾಗವಾಗಿ ಸಾಗಿದೆ, ಹೊಸ ಪದ್ಧತಿಯಿಂದ ಸಹಜವಾಗಿ ರೈತರಿಗೆ ತೊಂದರೆಯಾಗಿದೆ ಆದರೆ ರೈತರಿಂದ ಬರುವ ಕಲ್ಲು ಮತ್ತು ಕಸದ ರಾಗಿಗೆ ಕಡಿವಾಣ ಹಾಕಲು ಹೊಸ ಪದ್ದತಿ ಜಾರಿ ಮಾಡಲಾಗಿದೆ, ರೈತರ ಬೇಡಿಕೆಯಂತೆ ಆಧಾರ್ ಕಾರ್ಡ್, ಪಹಣಿ ಮತ್ತು ಪೋನ್ ನಂಬರ್ ಕೊಟ್ಟರೆ ಹೊಸ ಚೀಲಗಳನ್ನು ಕೊಡಲಾಗುವುದು ಇದರಿಂದ ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿಳಲಿದೆ ಎಂದು ರಾಗಿ ಖರೀದಿ ಕೇಂದ್ರ ಅಧಿಕಾರಿ ಮಹೇಶ್ ತಿಳಿಸಿದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

6 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

18 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

20 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

22 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

22 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago