ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ 55,18,188 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಿ ಇಂದು ಮಧ್ಯಾಹ್ನ 3ಕ್ಕೆ ಮುಕ್ತಾಯ ಮಾಡಲಾಯಿತು.
ಇಂದು ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 55, 18,188 ನಗದು, 1ಕೆ.ಜಿ. 450 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.