ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾಣಿಕೆ ಹುಂಡಿ ಎಣಿಕೆ: 55,18,188 ರೂ. ಸಂಗ್ರಹ

ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ 55,18,188 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್‌ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಿ ಇಂದು ಮಧ್ಯಾಹ್ನ 3ಕ್ಕೆ ಮುಕ್ತಾಯ ಮಾಡಲಾಯಿತು.

ಇಂದು ನಡೆದ ಹುಂಡಿ‌ ಎಣಿಕೆ‌ ಕಾರ್ಯದಲ್ಲಿ 55, 18,188 ನಗದು, 1ಕೆ.ಜಿ. 450 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ‌.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ಎನ್‌.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ‌ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್‌ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

3 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

15 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

17 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

19 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

20 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

21 hours ago