ತಾಲೂಕಿನ ಶ್ರೀ ಘಾಟಿ ಸಮೀಪ ಮದುವೆ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಮದುವೆಗೆಂದು ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಮದುವೆ ಮಂಟಪ ಇನ್ನೇನು ಸಮೀಪದಲ್ಲಿ ಇರುವಾಗಲೇ ಮದುವೆ ಹೋಗದೇ ಬಸ್ ಪಲ್ಟಿ.
ಘಟನೆಯಲ್ಲಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ.