ತಾಲೂಕಿನ ಹಲವಡೆ ಬಿರುಗಾಳಿ‌ ಸಹಿತ ಭಾರೀ ಮಳೆ: ಘಾಟಿ ರಸ್ತೆಯ ತಿರುಮಗೊಂಡನಹಳ್ಳಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ: ಸ್ವಲ್ಪದರಲ್ಲಿ ಬಚಾವ್ ಆದ ಬಿಎಂಟಿಸಿ ಬಸ್: ಸ್ಥಳಕ್ಕೆ ಬೆಸ್ಕಾಂ‌ ಸಿಬ್ಬಂದಿ ಭೇಟಿ, ಪರಿಶೀಲನೆ

ಇಂದು ಸಂಜೆ ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಭಾರೀ ಬಿರುಗಾಳಿ ಸಹಿತ ಮಳೆಯಿಂದಾಗಿ ಅಲ್ಲಲ್ಲಿ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿರುವ ಘಟನೆಗಳು ನಡೆದಿವೆ‌.

ಘಾಟಿ ಸುಬ್ರಹ್ಮಣ್ಯ ದೇವಾಲಯ ರಸ್ತೆಯ ತಿರುಮಗೊಂಡನಹಳ್ಳಿ ಸಮೀಪ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ಎರಡು‌ ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಸ್ವಲ್ಪದರಲ್ಲಿ ಬಿಎಂಟಿಸಿ ಬಸ್ ಬಚಾವ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಕೆಲಕಾಲ ಮಳೆಯಲ್ಲೇ ವಾಹನ ಸವಾರರು ನಿಂತ್ತಿದ್ದರು.

ಮಾಹಿತಿ ತಿಳಿದ ಬೆಸ್ಕಾಂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಂಬಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು‌ ಮಾಡಿಕೊಟ್ಟಿದ್ದಾರೆ.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

2 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

4 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

6 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

6 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

11 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

12 hours ago