
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಹಾಗೂ ಉಪ ವಿಭಾಗಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ.

ಆಫೀಸ್ ಗೆ ತಡವಾಗಿ ಬಂದ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಬೆಳಗ್ಗೆ 10 ಗಂಟೆಯಾದರೂ ಕಚೇರಿಯಲ್ಲಿ ಯಾವೊಬ್ಬ ಅಧಿಕಾರಿ ಇಲ್ಲದೇ ಖಾಲಿ ಖಾಲಿ ಇದ್ದಿದ್ದನ್ನು ಗಮನಿಸಿದ ಸಚಿವ ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರನ್ನು ಅವರನ್ನು ಸಹ ತರಾಟೆಗೆ ತೆಗೆದೊಕೊಂಡಿದ್ದಾರೆ.