ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ಆರೋಪ: ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಇಂದು(ಡಿ.4) ಎಸಿ ಕಚೇರಿ ಮುಂದೆ ಸಿಪಿಐಎಂ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಡಿ.4ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.

ಮಂಗಳವಾರ ನಗರದ ಸಿಪಿಐಎಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಉಳ್ಳವರಿಗಷ್ಟೇ ಸೀಮಿತವಾಗಿದೆ. ಬಡ ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನಮ್ಮ ಬೇಡಿಕೆಗಳಿಗೆ ಸೂಕ್ತ ಉತ್ತರ ನೀಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಬಗರ್ ಹುಕ್ಕಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯಾ ಹೋಬಳಿಗಳ ನಾಡಕಚೇರಿಗಳಲ್ಲಿ ಪ್ರಕಟಿಸಬೇಕು. ಸರ್ಕಾರಿ ಸ್ವತ್ತುಗಳು ಉಳ್ಳವರ ಪಾಲಾಗುತ್ತಿವೆ ಇವುಗಳ ರಕ್ಷಣೆಗೆ ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ. ನಗರದ ತಾಲ್ಲೂಕು ಕಚೇರಿ ಆವರಣ ಕಸದ ತಿಪ್ಪೆಯಂತಾಗಿದ್ದರು ಸ್ವಚ್ಛತೆ ಕಡೆಗೆ ಯಾವುದೇ ಗಮನವನ್ನು ನೀಡುತ್ತಿಲ್ಲ. ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಾಗಿವೆ ಎಂದು ದೂರಿದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ಮಾತನಾಡಿ, ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸೇರಿದಂತೆ ಇತರೆ ಪ್ರಕರಣಗಳ ವಿಚಾರಣೆ ಮುಗಿದು ಆದೇಶಕ್ಕೆ ಕಾಯ್ದಿರಿಸಿದ ನಂತರ ಆದೇಶ ಪ್ರಕಟಿಸಲು ದಿನಾಂಕ ನಿಗದಿಯಾಗಬೇಕು. ಆದೇಶದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಗುಮಾಸ್ತರ ಬಳಿಗೆ ಅಲೆದಾಡುವ ಪ್ರರಿಸ್ಥಿತಿಯನ್ನು ತಪ್ಪಿಸಬೇಕು ಎಂದರು.

ಸಿಪಿಐಎಂ ರಾಜ್ಯ ಮುಖಂಡರಾದ ಬೆಳವಂಗಲಪ್ರಭಾ ಮಾತನಾಡಿ, ತಾಲ್ಲೂಕು ಕಚೇರಿಯಿಂದ ಮಹಿಳೆಯರು ವಂಶವೃಕ್ಷ ಪಡೆಯಲು ಅರ್ಜಿ ಸಲ್ಲಿಸಿದರೆ ನಿರಾಕರಿಸುತ್ತಿದ್ದಾರೆ. ತಾಲ್ಲೂಕು ಕಚೇರಿಯಿಂದ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಅರ್ಜಿಸಲ್ಲಿಸುವ ಸಮಾನ ಹಕ್ಕು ಮಹಿಳೆಯರಿಗು ಇದೆ. ಆಡಳಿತದ ಮುಖ್ಯ ಸ್ಥಾನಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದರೆ ಮಹಿಳೆಯರು ಸೇರಿದಂತೆ ಬಡವರಿಗೆ ನ್ಯಾಯ ದೊರೆಯುತ್ತದೆ ಎನ್ನುವ ನಂಭಿಕೆ ಇದೆ. ಆದರೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಮಹಿಳೆಯರೆ ಇದ್ದರು ಸಹ ಆಡಳಿತ ಸಂಪೂರ್ಣವಾಗಿ ಕುಸಿತವಾಗಿದೆ. ಅಧಿಕಾರಿಗಳನ್ನು ಸಾರ್ವಜನಿಕರು ಭೇಟಿ ಮಾಡುವ ಸಮಯದಲ್ಲು ಸಹ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯ ಇರುವುದೇ ಇಲ್ಲ. ಮುಖ್ಯ ಅಧಿಕಾರಿಗಳೆ ಕಚೇರಿಯಲ್ಲಿ ಇಲ್ಲದ ಮೇಲೆ ಇತರೆ ಸಿಬ್ಬಂದಿಯು ಕಚೇರಿಯಲ್ಲಿ ಸಾರ್ವಜನಿಕರ ಕೈಗೆ ಸಿಗುವುದೇ ಅಪರೂಪವಾಗಿದೆ ಎಂದು ದೂರಿದರು.

ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಸಿ.ಎಚ್.ರಾಮಕೃಷ್ಣ ಮಾತನಾಡಿ, ನಾಡಕಚೇರಿಗಳ ವಿದ್ಯುತ್ ಬಿಲ್ ಪಾವತಿ ಮಾಡದೇ ಇರುವುದರಿಂದ ಬೆಸ್ಕಾಂ ವಿದ್ಯುತ್ ಸರಬರಾಜು ನಿಲ್ಲಿಸಿದೆ. ಶನಿವಾರದಿಂದಲು ನಾಡ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಎಲ್ಲಾ ಅಗತ್ಯ ದಾಖಲೆಗಳು ಇದ್ದರು ಸಹ ಪೌತಿ ಖಾತೆಗಳಿಗೆ ಅರ್ಜಿ ಸಲ್ಲಿಸಲು ಗ್ರಾಮಲೆಕ್ಕಾಧಿಕಾರಿಗಳಿಂದ ಸಹಿ ಪಡೆಯಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ. ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮಾಡಲಾಗಿದೆ. ಆದರೆ, ತಾಂತ್ರಿಕ ತೊಂದರೆಗಳನ್ನು ನಿವಾರಣೆ ಮಾಡುವ ಸೂಕ್ತ ಸಿಬ್ಬಂದಿ ಇಲ್ಲದೆ ಆನ್ಲೈನ್ ಸೇವೆಗಳಿಗೆ ಸಾರ್ವಜನಿಕರು ಬೇಸತ್ತು ಹೋಗುವಂತಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ವಿಷಕಂಠ, ಸಿಪಿಐಎಂ ಮುಖಂಡರಾದ ಪಿ.ಎ.ವೆಂಕಟೇಶ್, ಮಂಜುನಾಥ್,ಪ್ರಜಾ ವಿಮೋಚನ ಸಮಿತಿ ಮುಖಂಡ ಗೂಳ್ಯಹನುಮಣ್ಣ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಇದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

20 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago