ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕಾಧಿಕಾರಿಯಾಗಿದ್ದ ಶ್ರೀನಾಥ್ ಗೌಡ ವರ್ಗಾವಣೆ ಆಗಿದ್ದಾರೆ. ದೇವನಹಳ್ಳಿ ತಾಲ್ಲೂಕು ಪಂಚಾಯತಿಯ ಇಒ ಆಗಿ ವರ್ಗಾವಣೆ ಮಾಡಿ ಆದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪಕಾರ್ಯದರ್ಶಿ ಶಕುಂತಲಾ ಚೌಗಲಾ.
ದೇವನಹಳ್ಳಿ ತಾಲ್ಲೂಕು ಪಂಚಾಯತಿ ಇಒ ಆಗಿದ್ದ ಹೆಚ್.ಡಿ.ವಸಂತಕುಮಾರ ರವರ ಜಾಗಕ್ಕೆ ಶ್ರೀನಾಥ್ ಗೌಡ ಅವರನ್ನು ನೇಮಕ ಮಾಡಲಾಗಿದೆ.ಇನ್ನೂ ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಇಒ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿಲ್ಲ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಸಾಮಾನ್ಯ ಸೇವ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ)ಯ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಕ್ಕೆ ಸೇರಿದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ಕಾರ್ಯದರ್ಶಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿವಿಧ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪಕಾರ್ಯದರ್ಶಿ ಶಕುಂತಲಾ ಚೌಗಲಾ