ಪದವಿ ಪೂರ್ವ ಶಿಕ್ಷಣ ಇಲಾಖೆ ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.
ಈ ಕ್ರೀಡಾಕೂಟದಲ್ಲಿ ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀವಾಣಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಅನೀಶ್ ಆರಾಧ್ಯ ಅವರು ಸಾಂಪ್ರದಾಯಿಕ ಯೋಗಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಸಾಂಪ್ರದಾಯಿಕ ಯೋಗಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಬಿ.ಅನಿಲ್ ಆರಾಧ್ಯ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಗಿದೆ.