ತಾಲೂಕು ಮಟ್ಟದ ಖೋ ಖೋ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತೂಬಗೆರೆಯ ಶಾಲಾ ಮಕ್ಕಳು: ಗ್ರಾಮಸ್ಥರಿಂದ ಅಭಿನಂದನೆ

ನಗರದ ಭಗತ್ ಸಿಂಗ್ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ತೂಬಗೆರೆ ಸರ್ಕಾರಿ ಪ್ರೌಢಶಾಲಾ ಮಕ್ಕಳು. ಈ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ವಿಶೇಷವೇನೆಂದರೆ ಒಂದುವರೆ ವರ್ಷಗಳಿಂದ ಈ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದಿದ್ದರೂ ಸಹ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಹಕಾರ, ತರಬೇತಿಯಿಂದ ವಿದ್ಯಾರ್ಥಿಗಳು ಕ್ರೀಡಾ ಕೌಶಲ್ಯಗಳನ್ನು  ಸರಿಯಾದ ರೀತಿಯಲ್ಲಿ ಅಳವಡಿಸಿಕೊಂಡು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ.

ಪ್ರತಿ ವರ್ಷ ದೈಹಿಕ ಶಿಕ್ಷಕರು ಇದ್ದಂತಹ ಸಮಯದಲ್ಲಿ ತೂಬಗೆರೆ ಪ್ರೌಢಶಾಲೆಯಿಂದ ಒಬ್ಬ ವಿದ್ಯಾರ್ಥಿಯಾದರು ವಿವಿಧ ಕ್ರೀಡಾ ವಿಭಾಗದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈಗ ದೈಹಿಕ ಶಿಕ್ಷಕರು ಇಲ್ಲದಿದ್ದರೂ ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿರುವುದನ್ನು ಕಂಡು ಶಾಲೆಯ ಹಳೆಯ ವಿದ್ಯಾರ್ಥಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮುಖಾಂತರ ಕ್ರೀಡಾ ಪುಟ್ಟುಗಳಿಗೆ ಅಭಿನಂದಿಸಿ ಮುಂದಿನ ಸ್ಪರ್ಧೆಗೆ ಪ್ರೋತ್ಸಾಹಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ್, ಶಿಕ್ಷಕರು ಮತ್ತು ಸಹ ಶಿಕ್ಷಕರಾದ ಎಚ್.ನಾರಾಯಣ್, ಹಳೆಯ ವಿದ್ಯಾರ್ಥಿಗಳಾದ ನರಸಿಂಹರಾಜ, ಗಂಗಾಧರ, ವಿನೋದ್, ಉದಯ ಆರಾಧ್ಯ, ಕಿರಣ್, ಸುನಿಲ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago