ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಡಾಕ್ಟರ್ ಆಂಜನಪ್ಪ, ವರಲಕ್ಷ್ಮಿ ಪಿಎಸ್ಐ ದೊಡ್ಡಬೆಳವಂಗಲ, ಉಮಾರಬ್ಬ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ
ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕುರಿತು ಮಾತನಾಡಿದ ಡಾಕ್ಟರ್ ಆಂಜನಪ್ಪ, ಇತ್ತಿಚಿನ ದಿನಗಳಲ್ಲಿ ಥೈರಾಯ್ಡ್ ಹಾರ್ಮೋನ್ ಸಮಸ್ಯೆ ಹೆಚ್ಚಾಗುತ್ತಿದ್ದು, ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ ಸಮಸ್ಯೆ ಬರುತ್ತಿದೆ. ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.

ಕಿಡ್ನಿ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದರು.
ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗುವುದು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ನಮ್ಮ ಆಹಾರ ಪದ್ಧತಿ ಹಾಗೂ ಜೀವನ ಶೈಲಿ ಕಾರಣ ಎಂದು ತಿಳಿಸಿದರು.

ಮಹಿಳೆಯರಲ್ಲಿ ಅತೀ ಹೆಚ್ಚು ಕಂಡುಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡುತ್ತಾ ಇತ್ತಿಚಿನ ದಿನಗಳಲ್ಲಿ ಅಹಾರ ಪದ್ಧತಿಯಿಂದ ಗರ್ಭಕೋಶದ ಸಮಸ್ಯೆ ಬರುತ್ತಿದೆ. ಇದರಿಂದ ಮರಣದ ಸಂಖ್ಯೆ ಹೆಚ್ಚುತ್ತಿದೆ. ಇದರ ಬಗ್ಗೆ ಗಮನಹರಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.

ಪಿಎಸ್ಐ ವರಲಕ್ಷ್ಮಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಖಿನ್ನತೆಯಿಂದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚಾಗಿದೆ. ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ.
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರ ಸಕಾಲದಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದ್ದಲ್ಲಿ ಮುಂದೆ ಉತ್ತಮ ನಾಗರಿಕರಾಗುತ್ತಾರೆ ಎಂದು ತಿಳಿಸಿದರು.

ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ,
ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಲು ಜ್ಞಾನವಿಕಾಸದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಿಗೆ, ಕಾನೂನು, ಆರೋಗ್ಯದ ಬಗ್ಗೆ ಪ್ರತಿ ತಿಂಗಳು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್, ಒಕ್ಕೂಟದ ಅಧ್ಯಕ್ಷರಾದ ವಸಂತಾ,
ಸಮನ್ವಾಯಾದಿಕಾರಿ ಛಾಯಾಕುಮಾರಿ, ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ, ವಲಯ ಮೇಲ್ವಿಚಾರಕ ಗಿರಿಜ, ರೇಣುಕಾಪ್ರಸಾದ್ ಹಾಗೂ ಸಂಘದ ಸೇವಾಪ್ರತಿನಿಧಿಗಳು, VLE ಸೇವಾದಾರರು, ಸಂಘದ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *