ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.
ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.
ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.
ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.
ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…