ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ TAPMCS ನೂತನ ಸದಸ್ಯ ಪುರುಷೋತ್ತಮ್ ಅವರಿಗೆ ಸನ್ಮಾನ

ದೊಡ್ಡಬಳ್ಳಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ(TAPMCS) ಸಂಘಕ್ಕೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಗುತ್ತಿಗೆದಾರ ಪುರುಷೋತ್ತಮ್ ಅವರಿಗೆ ಅಭಿನಂದನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.

ಅಭಿನಂದನೆ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪುರುಷೋತ್ತಮ್, ನ.2ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತಗಳನ್ನು ನೀಡಿ ನನನ್ನು ಗೆಲ್ಲಿಸಿದ ತಾಲೂಕಿನ‌ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಗುತ್ತಿಗೆದಾರನಾಗಿ ತಾಲೂಕಿನಾದ್ಯಂತ ಕೆಲಸ ಮಾಡಿದ್ದೇನೆ. ಇದೀಗ ರೈತರ ಪರವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಗುತ್ತಿಗೆದಾರರಿಗೆ ಹಾಗೂ ತಾಲೂಕಿನ ರೈತರಿಗೆ ಟಿಎಪಿಎಂಸಿಎಸ್ ನಿಂದ ಸಿಗುವ ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಪ್ರಯತ್ನಪಡುತ್ತೇನೆ. ನಾನು ಗೆಲುವನ್ನು ಗುತ್ತಿಗೆದಾರರು ಎಲ್ಲರು ಸೇರಿ‌ ಸಂಭ್ರಮಿಸಿ ನನಗೆ ಅಭಿನಂದನೆ ಸಲ್ಲಿಸುತ್ತಿರುವುದಕ್ಕೆ ನಾನು ಅವರಿಗೆಲ್ಲರಿಗು ಧನ್ಯವಾದ ತಿಳಿಸುತ್ತೇನೆ ಎಂದರು.

ನಂತರ ಗುತ್ತಿಗೆದಾರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಗುತ್ತಿಗೆದಾರರ ಸಂಘ ಪ್ರಾರಂಭವಾಗಿ ಸುಮಾರು 30-40ವರ್ಷಗಳು ಕಳೆದಿವೆ. ಗುತ್ತಿಗೆದಾರರ ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಅದೇರೀತಿ ಅತಿ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಜಯಶೀಲರಾದ ಪುರುಷೋತ್ತಮ್ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ‌ ಎಂದರು.

ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸಚಿವರ ಗಮನಕ್ಕೆ ಕಾಲಕಾಲಕ್ಕೆ ತರುತ್ತಿರುತ್ತೇವೆ. ಕೆಲವೊಂದು ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತೇವೆ. ಸದ್ಯ ಗುತ್ತಿಗೆದಾರರಿಗೆ ಕೆಲಸಗಳು ಸಿಗುತ್ತಿಲ್ಲ. ಎಲ್ಲವನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೆ.ಬಿ ಬಚ್ಚೇಗೌಡ, ಖಜಾಂಚಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ವಿ.ಲಕ್ಷ್ಮೀಕಾಂತ್, ಗುತ್ತಿಗೆದಾರರಾದ ಹರೀಶ್, ಚನ್ನೇಗೌಡ, ಬ್ರಹ್ಮದೇವ, ರಾಜಣ್ಣ, ನಂದಕುಮಾರ್, ಕೆಂಪೇಗೌಡ ಸೇರಿದಂತೆ ಇತರೆ ಗುತ್ತಿಗೆದಾರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

2 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

21 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago