ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ನಾಲ್ಕು ತಾಲ್ಲೂಕಿನಲ್ಲೂ ಏಕಕಾಲದಲ್ಲಿ ಚಾಲನೆ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.21, 22 ರಂದು ಏಕಕಾಲದಲ್ಲಿ ನಡೆಸಲಾಗುತ್ತಿದ್ದು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಆಯೋಜಿಸಲಾಗುವ ಕ್ರೀಡೆಗಳ ವಿವರ 

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ

ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ

ಫುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ,

ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಯೋಗ – ಪುರುಷ ಮತ್ತು ಮಹಿಳೆಯರಿಗೆ

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ, ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ

ಷರತ್ತು ಮತ್ತು ನಿಬಂಧನೆಗಳು

ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆ ರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್/ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ)

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು.  ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು.ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿರಬೇಕು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್ ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

 ಹೆಚ್ಚಿನ ಮಾಹಿತಿಗಾಗಿ

1.ಸುನಿಲ್‌ನಾಯ್ಕ ದೈಹಿಕ ಶಿಕ್ಷಣ ಪರಿವೀಕ್ಷಕರು, ದೊಡ್ಡಬಳ್ಳಾಪುರ ತಾಲ್ಲೂಕು 9449375395,

2.ವೆಂಕಟೇಶ್.ಟಿ ದೈಹಿಕ ಶಿಕ್ಷಣ ಪರಿವೀಕ್ಷಕರು, ದೇವನಹಳ್ಳಿ ತಾಲ್ಲೂಕು 9740182577,

3.ರವಿಕುಮಾರ್ 3.ದೈಹಿಕ ಶಿಕ್ಷಣ ಪರಿವೀಕ್ಷಕರು, ನೆಲಮಂಗಲ ತಾಲ್ಲೂಕು 9880781906,

4.ಜಗದೀಶ್ ದೈಹಿಕ ಶಿಕ್ಷಣ ಪರಿವೀಕ್ಷಕರು, ಹೊಸಕೋಟೆ ತಾಲ್ಲೂಕು 9141125857 ಸಂಪರ್ಕಿಸಬಹುದು ಎಂದು

ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago