Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

6 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

9 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

12 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

14 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

15 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago