ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ.
ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್‌ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.
ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72
ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16 ಸೋಮವಾರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್‌ಸೈಟ್‌ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…