ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100 ಮಂದಿ ಅರ್ಹ ರೈತ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ವಿತರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಬಗರ್ ಹುಕುಂ ಸಮಿತಿ ಸಭೆಯನ್ನು ಕೇವಲ ಕಾಟಚಾರಕ್ಕೆ ಮಾಡುವುದಲ್ಲ, ಸಭೆ ಮಾಡಿದ ಮೇಲೆ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಅರ್ಹ ರೈತರನ್ನ ಗುರುತಿಸುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದೇನೆ ತಿಂಗಳೊಳಗೆ ಸಭೆ ಮಾಡಿ ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.

ಸಾಗುವಳಿ ಚೀಟಿ ಕೊಡಿ..

ಸಾಗುವಳಿ ಚೀಟಿ ನೀಡಿ.. ಜಮೀನಿಗೆ ರಸ್ತೆ ಮಾಡಿಸಿ, ಇ-ಖಾತೆಣ, ಫವತಿ ಖಾತೆ, ಸ್ಮಶಾನಕ್ಕೆ ಜಾಗ ಗುರುತಿಸಿ, ನಿವೇಶನ ಹಂಚಿಕೆ ಮಾಡಲು ಜಮೀನು ಸರ್ವೆ ಮಾಡಿಸಿ.. ದನಕರು ಮೇಯಿಸಲು ಜಮೀನು ಮೀಸಲಿಡಿ.. ಹೀಗೆ ಸಮಸ್ಯೆಗಳ ಸರಮಾಲೆಯನ್ನ ರೈತರು, ಸಾರ್ವಜನಿಕರು ಶಾಸಕರ ಬಳಿ ಮನವಿ ಮಾಡಿದರು.

ಅರ್ಜಿಗಳ ಸ್ವೀಕಾರದ ಬಳಿಕ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಶಾಸಕರ ಲೆಟರ್ ಹೆಡ್ ಮೂಲಕವೂ ರೈತರ ಅರ್ಜಿಗಳನ್ನ ಫಾಲೋಅಪ್ ಮಾಡಲಾಗುವುದು. ಈ ಸಭೆಯಲ್ಲಿಯೇ ಇ-ಆಫೀಸ್ ನಂಬರ್ ಗಳನ್ನು ಸೃಜನೆ  ಮಾಡಲಾಗಿದೆ. ಮುಂದಿನ ಕಂದಾಯ ಅದಾಲತ್ ವೇಳೆಗೆ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.

ಗ್ರಾಮಗಳ ಸ್ಮಶಾನ, ಜಮೀನುಗಳಿಗೆ ರಸ್ತೆ ಪ್ರಕರಣಗಳನ್ನು ಶೀಘ್ರವಾಗಿ ಪೂರ್ಣಮಾಡಿ ವರದಿ ನೀಡುವಂತೆ ಸರ್ವೇ ಇಲಾಖೆಗೆ ಸೂಚಿಸಿದರು.

ಸರ್ಕಾರಿ ಜಮೀನು ರಕ್ಷಣೆಗೆ ಸೂಚನೆ:

ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ 162 ರಲ್ಲಿ 7 ಎಕರೆ ಸರ್ಕಾರಿ ಜಮೀನಿಗೆ ಖಾಸಗಿಯವರು ಕಾಂಪೌಂಡ್ ಹಾಕಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ. ಈ ಒತ್ತುವರಿಯನ್ನು ಕೂಡಲೇ ತೆರವು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಸ್ಥಳದಲ್ಲಿಯೇ ಸರ್ವೇಯರ್ ಮಂಜುನಾಥಗೆ ಕರೆ ಮಾಡಿ ಈ ಕ್ಷಣವೇ ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಹಶೀಲ್ದಾರ್ ಒಳಗೊಂಡಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕ್ರಮಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಉಪತಹಶೀಲ್ದಾರ್ ಪ್ರಕಾಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಂದಾಯ ಇಲಾಖಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

4 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago