Categories: ಕೋಲಾರ

ತಿಂಗಳೊಳಗೆ ಒಪಿಎಸ್ ಜಾರಿಗೆ ಪ್ರಯತ್ನ, ನೌಕರರ ಹಿತವೇ ಸಂಘದ ಗುರಿ -ಸಿ.ಎಸ್ ಷಡಾಕ್ಷರಿ ಭರವಸೆ

ಕೋಲಾರ: ರಾಜ್ಯ ಸರ್ಕಾರದಿಂದ ಮುಂದಿನ ತಿಂಗಳೊಳಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ದು ಮಾಡಿ, ಹಳೇ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೊಳಿಸಲು ಪ್ರಯತ್ನಿಸಲಾಗುತ್ತದೆ ನೌಕರರ ತೊಂದರೆಗೆ ಸಂಘವು ನೈತಿಕ ಶಕ್ತಿ ತುಂಬುವುದು ನಮ್ಮ ಗುರಿಯಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಎರಡನೇ ಬಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೆ ಅಭಿನಂದನೆ ಮತ್ತು ಉತ್ತಮ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷವು ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿದ್ದವು. ಆದರೆ, ಆ ಸರಕಾರಗಳು ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್‌ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

ಕಳೆದ ಐದು ವರ್ಷದಲ್ಲಿ ಸುಮಾರು 25 ಆದೇಶಗಳನ್ನು ನೌಕರರ ಪರವಾಗಿ ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿದೆ ಇನ್ನೂ ಎರಡು ಮೂರು ತಿಂಗಳಲ್ಲಿ ನೌಕರರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ವಿಮೆಯೊಂದಿಗೆ ಡಯಾಲಿಸಿಸ್ ಹಾಗೂ ಕ್ಯಾನ್ಸರ್ ಅಂತಹ ಕಾಯಿಲೆಗಳಿಗೆ ಆರು ತಿಂಗಳ ರಜೆಯೊಂದಿಗೆ ಸಂಬಳ ನೀಡುವ ಆದೇಶವನ್ನು ಜಾರಿ ಮಾಡಲಾಗುತ್ತದೆ ಮುಂದಿನ ವರ್ಷ 2026 ರಲ್ಲಿ ಕೇಂದ್ರ ಸರ್ಕಾರದ ವೇತನ ಆಯೋಗದ ಜಾರಿ ರೀತಿಯಲ್ಲಿಯೇ ರಾಜ್ಯದಲ್ಲೂ 8 ನೇ ವೇತನ ಆಯೋಗವನ್ನು ಜಾರಿಗೊಳಿಸಲು ಪ್ರತಿಯೊಬ್ಬ ನೌಕರರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ನೌಕರರ ನಿರಂತರ ಚಟುವಟಿಕೆಗಳಿಗೆ ನೌಕರರ ಭವನಗಳು ಅವಶ್ಯಕತೆ ಇದ್ದು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಮೊದಲ ಅಧ್ಯತೆ ನೀಡಲಾಗುತ್ತದೆ ಅದರಂತೆ ಸರ್ಕಾರದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ತಲಾ 50 ಲಕ್ಷ ಹಾಗೂ ತಾಲ್ಲೂಕು ಕೇಂದ್ರಕ್ಕೆ 25 ಲಕ್ಷ ರೂಗಳನ್ನು ಬಿಡುಗಡೆ ಮಾಡಿಸಲು ಒತ್ತಾಯಿಸಲಾಗುತ್ತದೆ ನೌಕರರ ಸಹಕಾರ ಹಾಗೂ ಸಂಘಟನೆ ಮೂಲಕ ನಮ್ಮ ಎಲ್ಲಾ ಹಕ್ಕುಗಳನ್ನು ಹಾಗೂ ಸೌಲಭ್ಯಗಳನ್ನು ಪಡೆಯಲು ರಾಜ್ಯ ಸರ್ಕಾರಿ ನೌಕರರ ಸಂಘವು ಶತಪ್ರಯತ್ನ ಮಾಡಲಾಗುವುದೆಂದು ಹೇಳಿದರು.

ರಾಜ್ಯ ಸಂಘದ ನೇತೃತ್ವದಲ್ಲಿ ಜಿಲ್ಲಾ ತಾಲೂಕು ಘಟಕದ ವತಿಯಿಂದ ನೌಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದರೆ, ಇನ್ನು ಕೆಲವು ಸಂಘಟನೆಯವರು ಎನ್‌ಪಿಎಸ್‌ ಸಮಸ್ಯೆಯನ್ನು ಜೀವಂತವಾಗಿಟ್ಟು, ಹೋರಾಟದ ಹೆಸರಿನಲ್ಲಿ ದೇಣಿಗೆ ಎತ್ತಬೇಕೆಂಬ ಮನಸ್ಥಿತಿ ಹೊಂದಿದ್ದಾರೆ. ನನ್ನ ಅವಧಿಯಲ್ಲಿ 7ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವುದು ಸೇರಿ ಒಟ್ಟು 25 ಸರಕಾರಿ ಆದೇಶಗಳನ್ನು ನಮ್ಮ ಅವಧಿಯಲ್ಲಿ ಜಾರಿ ಮಾಡಲಾಗಿದೆ ನಾವು ಎಲ್ಲೂ ಸಹ ಒಂದೇ, ಒಂದು ರೂಪಾಯಿ ದೇಣಿಗೆ ಎತ್ತಿಲ್ಲ 6 ಲಕ್ಷ ನೌಕರರಿಗೆ ಒಳ್ಳೆಯದು ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ ಅ ಕೆಲಸವನ್ನು ಆಯ್ಕೆಯಾದ ಪ್ರತಿಯೊಬ್ಬ ಪದಾಧಿಕಾರಿಗಳು ನಿರ್ದೇಶಕರು ಮಾಡಬೇಕು ಎಂದರು.

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ರಾಜ್ಯ ಸಂಘವು ನಿರಂತರ ಪ್ರಯತ್ನದಿಂದ ಸುಮಾರು 25 ನೌಕರರ ಸ್ನೇಹಿ ಆದೇಶಗಳನ್ನು ಜಾರಿ ಮಾಡಲಾಗಿದೆ ಮುಂದೆ ಆರೋಗ್ಯ ಸಂಜೀವಿನಿ, ಒಪಿಎಸ್ ಜಾರಿಗೆ ಜಿಲ್ಲಾ ಸಂಘವು ರಾಜ್ಯ ಸಂಘಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಕೋಲಾರ ಜಿಲ್ಲೆಯಲ್ಲಿನ ನೌಕರರ ಭವನಕ್ಕೆ ಅನುದಾನ ಕೊಡಿಸುವ ಜೊತೆಗೆ ಗಡಿನಾಡು ಉತ್ಸವ, ಹಾಗೂ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜ್, ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ, ಖಜಾಂಚಿ ವಿ.ವಿ ಶಿವರುದ್ರಯ್ಯ, ರಾಜ್ಯ ಪರಿಷತ್ ಸದಸ್ಯರಾದ ಶ್ರೀನಿವಾಸರೆಡ್ಡಿ, ಕೆ.ಟಿ.ಸುರೇಶ್ ಬಾಬು, ಚೇತನ್, ಜ್ಞಾನಪ್ರಕಾಶ್, ಶಂಕರಪ್ಪ, ರಾಜೇಶ್, ಜಿಲ್ಲಾ ಖಜಾಂಚಿ ಮುರಳಿಮೋಹನ್, ಕಾರ್ಯದರ್ಶಿ ಸತೀಶ್ ಕುಮಾರ್, ಗೌರವಧ್ಯಕ್ಷ ಕೆ. ಎನ್. ಮಂಜುನಾಥ, ಹಿರಿಯ ಉಪಾಧ್ಯಕ್ಷರಾದ ನಾಗಮಣಿ, ಹರಿಕೃಷ್ಣ, ಡಾ. ತಬಸ್ಸುಮ್, ಕೆ. ವಿಜಯ್, ತಾಲೂಕು ಅಧ್ಯಕ್ಷರಾದ ವಿ.ಮುನೇಗೌಡ, ಕೆ.ಎನ್ ಅರವಿಂದ್, ಆರ್.ರವಿ, ಎಂ.ಬೈರೇಗೌಡ, ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ವೃಂದಸಂಘಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago