ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ತಿಮ್ಮರಾಜು(ರಾಜು), ಉಪಾಧ್ಯಕ್ಷರಾಗಿ ವಿನೋಧಮ್ಮ ಅವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ತಿಮ್ಮರಾಜು(ರಾಜು) ಹಾಗೂ ವಿನೋಧಮ್ಮ ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ರಾಮಚಂದ್ರ ನಾಯ್ಕ್ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿ ವಿಎಸ್ಎಸ್ ಎನ್ ನೂತನ ಅಧ್ಯಕ್ಷ ತಿಮ್ಮರಾಜು(ರಾಜು) ಮಾತನಾಡಿ, ಪಹಣಿಗಳ ಆಧಾರದ ಮೇಲೆ ಲೋನ್ ನೀಡಲಾಗುವುದು. ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ.‌ ರೈತರ ಅಭಿವೃದ್ಧಿಗೆ ಸದಾ ಬದ್ಧರಾಗಿರುತ್ತೇವೆ ಎಂದರು..

ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ರಾಮಚಂದ್ರ ನಾಯ್ಕ್ , ವಸಂತ್ ಕುಮಾರ್, ಕಾಮರಾಜು, ತೂಬಗೆರೆ ಹೋಬಳಿ ಕಾಂಗ್ರೆಸ್ ಉಪಾಧ್ಯಕ್ಷ ನರಸಿಂಹ‌ಮೂರ್ತಿ, ನಾರಾಯಣ್(ಜಗ), ಸುಬ್ರಮಣಿ, ನರಸಿಂಹಮೂರ್ತಿ (ಮೂರ್ತಿ) ಇತರರು ಇದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

19 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

20 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago