ತಿಮ್ಮಸಂದ್ರ ಗ್ರಾಮದಲ್ಲಿ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಉದ್ಘಾಟನೆ

ಮಕ್ಕಳ ಕಲಿಕೆಯ ಬುನಾದಿಗೆ ಅಂಗನವಾಡಿಗಳು ಪೂರಕವಾಗಿರುವುದರಿಂದ ಇವುಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸಿಎಸ್‌ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಹಾಗೂ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಈ ಅಂಗನವಾಡಿ ನೂತನ ಕಟ್ಟಡವು ವಿಶೇಷವಾಗಿದ್ದು, ವಿನೂತನವಾದ ಡೂಮ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಕಟ್ಟಡದ ಒಳಗೆ ಆಹ್ಲಾದಕರ ವಾತಾವರಣದಿಂದ ಕೂಡಿದ್ದು ಮಕ್ಕಳು ಕಲಿಯಲು ಪೂರಕವಾದ ಅವಕಾಶ‌ವನ್ನು ಕಲ್ಪಿಸಲಾಗಿದೆ ಎಂದರು.

ಏಜಾಕ್ಸ್ ಕಂಪನಿಯು ಸಾಮಾಜಿಕವಾಗಿ ಉತ್ತಮವಾದ ಕಾರ್ಯವನ್ನು ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಯವರು ಶಾಲೆಯ ಕೊಠಡಿ ನಿರ್ಮಾಣವು ಕೂಡ ಗುಣಮಟ್ಟದಿಂದ ಕೂಡಿದೆ ಎಂದರು.

ಕಂಪನಿಯವರು ನೀಡಿರುವ ಈ ಕಟ್ಟಡವನ್ನು ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಸರಿಯಾದ ರೀತಿಯಲ್ಲಿ ನಿರ್ವಹಿಸಿ, ಮತ್ತಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾಪಾಡಿಕೊಳ್ಳಿ. ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಪೋಷಕರು ಮಾನವೀಯ ಮೌಲ್ಯಗಳನ್ನು ಬಾಲ್ಯದಲ್ಲೇ ಕಲಿಸಿ ಎಂದರು.

ನಂತರ ಶಾಸಕರಾದ ಟಿ.ವೆಂಕಟರಾಮಣಯ್ಯ ಮಾತನಾಡಿ, ಏಜಾಕ್ಸ್ ಕಂಪನಿಯ ಸಾಮಾಜಿಕ ಜವಾಬ್ಧಾರಿಯ ಸಹಕಾರದಿಂದ ನೂತನ ಕಟ್ಟಡವನ್ನು ನಿರ್ಮಿಸಿರುವುದು ಶ್ಲಾಘನೀಯವಾದದ್ದು. ಕೋವಿಡ್ ಸಂದರ್ಭದಲ್ಲಿ ಮೂರೂವರೆ ಕೋಟಿ ವೆಚ್ಚದ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸಿಕೊಟ್ಟಿದ್ದಾರೆ, ಅಲ್ಲದೆ ಶಾಲಾ ಕಟ್ಟಡವನ್ನು ಸಹಾ ನಿರ್ಮಿಸಿದ್ದಾರೆ, ಇದೇ ರೀತಿ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಆದ್ಯತೆ ನೀಡಿ ತಮ್ಮ ಸಾಮಾಜಿಕ ಕಾರ್ಯ ಮುಂದುವರೆಸಿ ಎಂದರು.

ಎಲ್ಲಾ ಸರ್ಕಾರಗಳು ಈ ಹಿಂದಿನಿಂದಲೂ ಶಿಕ್ಷಣಕ್ಕೆ ಮಹತ್ವ ನೀಡುತ್ತಿವೆ. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣವನ್ನು ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳತ್ತ ಮುಖ ಮಾಡದೇ ಹೆಮ್ಮೆಯಿಂದ ಸರಕಾರಿ ಶಾಲೆಗೆ ದಾಖಲಿಸಿ. ಸರ್ಕಾರಿ ಶಾಲೆಯ ಶಿಕ್ಷಕರು ಮೆರಿಟ್ ಆಧಾರದ ಮೇಲೆ ನೇಮಕವಾಗಿರುತ್ತಾರೆ. ಹಾಗಾಗಿ ಮಕ್ಕಳಿಗೆ ಕಲಿಯಲು ತುಂಬಾ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಟರಾಜ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನ್ ಕುಮಾರಿ, ಸಿಡಿಪಿಓ ಅನಿತಾಕುಮಾರಿ, ಅಜಾಕ್ಸ್ ಕಂಪನಿಯ ಹೆಚ್.ಆರ್.ಗಣಪತಿ, ಸಿ.ಎಸ್.ಆರ್. ಅಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

8 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

10 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

11 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

18 hours ago