ಬಾಗೇಪಲ್ಲಿಯಿಂದ ತಿರುಪತಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಟಿಟಿ ವಾಹನಕ್ಕೆ ಅಪರಿಚಿತ ಬೃಹತ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
9 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಆಂಧ್ರಪ್ರದೇಶದ ಮದನಪಲ್ಲಿಯ ಕುರುಬಲಕೋಟ ಮಂಡಲಂ ಚೆನ್ನಾಮರ್ರಿ ಮಿಟ್ಟ ಬಳಿ ಘಟನೆ ನಡೆದಿದೆ.
ಬಾಗೇಪಲ್ಲಿ ತಾಲ್ಲೂಕಿನ ಮೇಘರ್ಷ್ (17), ಚರಣ್(17) ಹಾಗೂ ಶ್ರಾವಣಿ (28)ಮೃತ ದುರ್ದೈವಿಗಳು.
ಬಾಗೇಪಲ್ಲಿಯಿಂದ ತಿರುಪತಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….