ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷಾ ವರದಿಯ ಸಂಶೋಧನೆಗಳು ದೃಢಪಡಿಸಿವೆ.
ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಈ ಹಿನ್ನೆಲೆ ತಿರುಪತಿಲಡ್ಡು ಅನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ದೃಢವಾಗಿದೆ.
ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.
ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಆದರೆ, ವೈಎಸ್‌ಆರ್‌ಸಿಪಿ ಈ ಆರೋಪವನ್ನು ತಳ್ಳಿ ಹಾಕಿತ್ತು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…