ತಿರುಪತಿ ಲಡ್ಡು ತಯಾರಿಕೆಯಲ್ಲಿ‌ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ) ಮತ್ತು ಮೀನಿನ ಎಣ್ಣೆ (FishOil) ಬಳಕೆ ದೃಢ

ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ತಿರುಪತಿಲಡ್ಡು ತಯಾರಿಕೆಯಲ್ಲಿ‌ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷಾ ವರದಿಯ ಸಂಶೋಧನೆಗಳು ದೃಢಪಡಿಸಿವೆ.

ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಈ ಹಿನ್ನೆಲೆ ತಿರುಪತಿಲಡ್ಡು ಅನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ತಿರುಪತಿಲಡ್ಡು ತಯಾರಿಕೆಯಲ್ಲಿ‌ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ದೃಢವಾಗಿದೆ.

ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.

ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಆದರೆ, ವೈಎಸ್‌ಆರ್‌ಸಿಪಿ ಈ ಆರೋಪವನ್ನು ತಳ್ಳಿ ಹಾಕಿತ್ತು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

16 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago