ತಿರುಮಲ ಘಾಟ್ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ತಿರುಮಲಕ್ಕೆ ತೆರಳುವ ಭಕ್ತರು ಜಾಗರೂಕರಾಗಿರಲು ಟಿಟಿಡಿ ಎಚ್ಚರಿಕೆ

ತಿರುಮಲ ಘಾಟ್ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಟಿಟಿಡಿ ವಿಜಿಲೆನ್ಸ್ ಅಧಿಕಾರಿಗಳ ಪ್ರಕಾರ, ಬುಧವಾರ ಮುಂಜಾನೆ ಕಾರಿನಲ್ಲಿ ತಿರುಪತಿಯಿಂದ ತಿರುಮಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಕಣ್ಣಿಗೆ‌ ಕಾಣಿಸಿಕೊಂಡಿದೆ.‌ ಬಳಿಕ, ಚಿರತೆ ಮತ್ತೆ ಅರಣ್ಯ ಪ್ರದೇಶದಲ್ಲಿ ಕಣ್ಮರೆಯಾಗಿದೆ. ಇದರಿಂದ ಭಕ್ತಾಧಿಗಳಲ್ಲಿ ಭಯ ಹುಟ್ಟಿಸಿದೆ.

ಶೇಷಾಚಲಂ ಅರಣ್ಯದಲ್ಲಿ ಚಿರತೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾದರೂ, ಪಾದಚಾರಿ ಮಾರ್ಗ ಮತ್ತು ಘಾಟ್ ರಸ್ತೆಗಳ ಮೂಲಕ ತಿರುಮಲಕ್ಕೆ ತೆರಳುವ ಭಕ್ತರು ಜಾಗರೂಕರಾಗಿರಲು ಟಿಟಿಡಿ ಎಚ್ಚರಿಕೆ ನೀಡಿದೆ.

ಕಳೆದ ವರ್ಷ ಆಗಸ್ಟ್ 11 ರಂದು ಆರು ವರ್ಷದ ಬಾಲಕಿ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ತಿರುಮಲಕ್ಕೆ ತೆರಳುತ್ತಿದ್ದಾಗ ಚಿರತೆ ದಾಳಿ ನಡೆಸಿತ್ತು.

Ramesh Babu

Journalist

Share
Published by
Ramesh Babu

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago