ಲೋಕಸಭಾ ಚುನಾವಣಾ ಕರ್ತವ್ಯದ ಮೇರೆಗೆ ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಕಾರು ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ತಮಿಳುನಾಡು ರಾಜ್ಯದ ಬಸ್‌ಗೆ ಡಿಕ್ಕಿಯಾದ ಪರಿಣಾಮ ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.
ಭೀಕರ ಅಪಘಾತದಲ್ಲಿ ಸಹಾಯಕ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ.
ಪ್ರಭಾಕರ್ ಅವರು ಕರ್ನಾಟಕ ಎಸ್‌ಟಿಎಫ್ ಮತ್ತು ಎಎನ್‌ಎಫ್‌ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.