ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕಾರ್ಯನಿರ್ವಹಿಸಿ ತಾಲೂಕಿನ ಮನೆ ಮಾತಾಗಿದ್ದ ತಹಶೀಲ್ದಾರ್ ನಾಹೀದಾ ಜಮ ಜಮ್ ರವರು ಜ.23ರಂದು ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು.ಈ ಮೂಲಕ ತುಮಕೂರು ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾದರು.
ನಹಿದಾ ಜಮ ಜಮ್ ನಾಗರಿಕ ಆಡಳಿತ ಸೇವೆಗೆ ಸೇರಿದ ನಂತರ ಮೊದಲ ಬಾರಿಗೆ 2019ರಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದರು. ಈ ವೇಳೆ 2020ರಲ್ಲಿ ಕೋವಿಡ್ ಆವರಿಸಿದ ಸಂದರ್ಭದಲ್ಲಿ ಗರ್ಭಿಣಿ ಎಂಬುದನ್ನು ಮರೆತು ಶಿರಾದಲ್ಲಿ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು. ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವ ವೇಳೆ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಕೂರದೇ ಇಡೀ ತಾಲ್ಲೂಕನ್ನು ಸುತ್ತುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದರು. ಇದರಿಂದಾಗಿ ಜನ ಹಾಗೂ ಇಲಾಖೆ ಮೆಚ್ಚುಗೆಗೂ ಪಾತ್ರರಾಗಿದ್ದರು.
2021ರ ಆಗಸ್ಟ್ ತಿಂಗಳಲ್ಲಿ ಕೊರಟಗೆರೆ ತಾಲೂಕಿಗೆ ವರ್ಗಾವಣೆಯಾಗಿ ಬಂದ ನಂತರ ಜನರ ನಾಡಿಮಿಡಿತ ಅರಿತು ಸಮಸ್ಯೆಗಳನ್ನು ಪರಿಹರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಜಟಿಲವಾದ ಸಮಸ್ಯೆಯಾಗಿದ್ದ ಬಗರ್‌ಹುಕುಂ ಸಾಗುವಳಿ ಹಕ್ಕುಪತ್ರ ನೀಡುವಲ್ಲಿ ಕಠಿಣ ಕ್ರಮ ಕೈಗೊಂಡು ರೈತರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈಗ ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಯಾವ ರೀತಿ ಅಧಿಕಾರ ಹಾಗೂ ಇಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…