ಕೋಲಾರ: ತಾಲ್ಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತುರಾಂಡಹಳ್ಳಿ ಗ್ರಾಮದ ಡೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಸಿ ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಲಾಗಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಕಟ್ಟಡ ಮಾಡುವುದು ನಮ್ಮ ಸಮಿತಿಯ ಗುರಿಯಾಗಿದೆ ಹಾಲು ಉತ್ಪಾದಕರ ಆರೋಗ್ಯವಿಮೆ ಬಗ್ಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸಲಾಗುವುದು ನಮ್ಮ ಸಹಕಾರ ಸಂಘವನ್ನೂ ಇನ್ನಷ್ಟೂ ಅಭಿವೃದ್ದಿಪಡಿಸಿ, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ಪ್ರಯತ್ನ ಮಾಡಲಾಗುವುದು. ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತುರಾಂಡಹಳ್ಳಿ ಡೇರಿಯ ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಜಿ.ಉಮಾ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಗ್ರಾಮಸ್ಥರು ಇದ್ದರು
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…