ತುರ್ತು ಕಾರ್ಯಾಚರಣೆ ಕೇಂದ್ರ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

ಮುಂಗಾರಿನಲ್ಲಿ ವಿಪತ್ತುಗಳಿಗೆ (ಪ್ರವಾಹ/ಭೂಕುಸಿತ) ತುತ್ತಾಗುವಂತಹ ತಾಲ್ಲೂಕು ಕೇಂದ್ರಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯುವುದು. ಅವಶ್ಯವೆನಿಸಿದಲ್ಲಿ 24/7 ಸಕ್ರಿಯಗೊಳಿಸಿ ವಿವಿಧ ಹಂತಗಳಲ್ಲಿ ವಿಪತ್ತು ನಿರ್ವಹಣೆಯಲ್ಲಿ ತೊಡಗಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಂಬಂಧಿಸಿದ ಇಲಾಖಾ ಧಿಕಾರಿಗಳಿಗೆ ಸೂಚಿಸಿದರು.

IMD, CWC, INCOIS,NDEM & KSNDMC ಮುಂತಾದ ನೋಡಲ್ ಏಜೆನ್ಸಿಗಳು ಹವಾಮಾನ, ನೀರಿನ ಹರಿವು ಸಮುದ್ರದ ಸಿಸಿ ಕುರಿತು ನೀಡುವ ಮುನ್ಸೂಚನೆ ಮತ್ತು ಮುನ್ನಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ತುರ್ತು ಸಂದರ್ಭಗಳಲ್ಲಿ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ತಲುಪುವಂತೆ ಕ್ರಮ ವಹಿಸಬೇಕು. ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು NDMA ಅಭಿವೃದ್ಧಿ ಪಡಿಸಿರುವ Common Alert Protocol ಮುಖಾಂತರ ಸಾರ್ವಜನಿಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ.

ಅವಶ್ಯವಿದ್ದಲ್ಲಿ ಜನಸಾಮಾನ್ಯರು KSNDMC
ಯಲ್ಲಿ ಚಾಲ್ತಿಯಿರುವ “ವರುಣ ಮಿತ್ರ” ಸಹಾಯ ವಾಣಿ 9243345433 ಗೆ ಕರೆ
ಮಾಡಿ ಹವಾಮಾನ ಮಾಹಿತಿ ಪಡೆಯುವುದು.

ಅಭಿವೃದ್ಧಿಪಡಿಸಿರುವ Damini App ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಮಾಹಿತಿ ಮತ್ತು alerts ಪಡೆಯಲು NDMA ಅಭಿವೃದ್ಧಿ ಪಡಿಸಿರುವ Sachet App ನಲ್ಲಿ ಸಹ ಪಡೆಯಬಹುದು ಅಥವಾ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು KSNDMC
ಅಭಿವೃದ್ಧಿಪಡಿಸಿರುವ Play Storeನಲ್ಲಿ ಲಭ್ಯವಿರುವ “Sidilu App” ನಲ್ಲಿ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಮಳೆಗಾಲಕ್ಕೆ ಮುಂಚಿತವಾಗಿ ಮಳೆ ನೀರು ಸರಾಗವಾಗಿ ಹರಿಯಲು ರಾಜ ಕಾಲುವೆ / ಚರಂಡಿ / ಸೇತುವೆ / ಕಲ್ಬರ್ಟ್ ಗಳಲ್ಲಿರುವ ಹೂಳು ತೆಗೆದು ಸ್ವಚ್ಛಗೊಳಿಸಿರಬೇಕು.

ನದಿ / ನೀರಾವರಿ ಕೆರೆಗಳು / ಕಾಲುವೆಗಳ, ದಡಗಳ ಹತ್ತಿರವಿರುವ ನೆರೆ ಪೀಡಿತ ಪ್ರದೇಶಗಳನ್ನು ಗುರುತಿಸುವುದು. ಚರಂಡಿಗಳ ಮೇಲೆ ಹೊದಿಸಿರುವ ಕಲ್ಲು ಕಾಂಕ್ರೀಟ್ ಅಂತರವಿಲ್ಲದೇ ಸಮರ್ಪಕವಾಗಿ ಮುಚ್ಚಲು ಕ್ರಮ ವಹಿಸಿಪ್ರವಾಹಕ್ಕೆ ತುತ್ತಾಗುವಂತಹ ಯಾವುದೇ ಪ್ರದೇಶಗಳಲ್ಲಿ ಮಳೆಗಾಲಕ್ಕೆ ಮುಂಚಿತವಾಗಿಯೇ ಪ್ರವಾಹ ಉಪಶಮನ ಕ್ರಮಗಳನ್ನು ಕೈಗೊಳ್ಳಬೇಕು. ನಗರ / ಗ್ರಾಮಗಳಲ್ಲಿ ಪ್ರವಾಹದಿಂದ ತಗ್ಗು ಪ್ರದೇಶಗಳಲ್ಲಿ, ನಿಂತ ನೀರನ್ನು ಹೊರಹಾಕಲು ಪಂಪ್‌ಸೆಟ್‌ಗಳನ್ನು ಸಜ್ಜುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ರೈತ ಸೇವಾಕೇಂದ್ರ (RSK) ವಾರು ವಿವಿಧ ಬಿತ್ತನೆ ಬೀಜ, ಸಾವಯವ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳ ನಿಗಧಿತ ಗುರಿ, ದಾಸ್ತಾನುಗಳ(Rakes) ಲಭ್ಯತೆ ಮತ್ತು ಕೊರತೆ ಕುರಿತು ಮಾಹಿತಿ ಪಡೆದುಕೊಂಡು ರೈತರಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರ ಖರೀದಿಸಲು  ಕೊರತೆ ಬಾರದಂತೆ ಹೆಚ್ಚುವರಿಯಾಗಿ ಸಂಗ್ರಹಿಸಿಡಿ. ಹನಿ ನೀರಾವರಿ, ಪಾಲಿಥೀನ್ ಶೀಟ್ ಬದಲೀಕರಣ(Replacement), ತರಕಾರಿ ಬೆಳೆಗಳಿಗೆ ಬಿತ್ತನೆ ಬೀಜ ಕಿಟ್ ವಿತರಣೆ, ಪ್ಯಾಕ್ ಹೌಸ್‌ ನಿರ್ಮಾಣಕ್ಕೆ ಸೂಕ್ತ ಕ್ರಮ ವಹಿಸಿ. ತಾಲ್ಲೂಕು ಮತ್ತು ಹೋಬಳಿವಾರು ಜಾನುವಾರುಗಳಿಗೆ ಮೇವು ಸಂಗ್ರಹಿಸಿ. ಮೀನುಗಾರಿಕೆಗೆ ಲಭ್ಯವಿರುವ ವಿವಿಧ ತಳಿಯ ಮೀನು ಮರಿಗಳು ಮತ್ತು ಮೀನು ಸಾಕಾಣಿಕೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು ಎಂದು ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮರ ಬೆಳೆಸಲು ಸಸಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಪಕ್ಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಜಲಾನಯನ ಇಲಾಖೆಯ ವತಿಯಿಂದ ಮಣ್ಣಿನಲ್ಲಿ ಮಳೆನೀರು ಸಂಗ್ರಹಣೆ, ಮತ್ತು ಹಿಂಗುವ ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ (ವಾರ್ಡ್ ವಾರು) ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ
ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳಲಿದ್ದು, ರೋಗಗಳು ಹರಡದಂತೆ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ಸೂಚಿಸಿದರು.

ಒಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ 2023ರ ಮುಂಗಾರು ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡು, ಮುಂಗಾರು ಮಳೆ ಹಾಗೂ ಚಂಡಮಾರುತಗಳ ಪರಿಣಾಮಗಳನ್ನು ತಗ್ಗಿಸುವ ಮೂಲಕ ವಿಪತ್ತು ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್,  ಕೃಷಿ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ,
ಉಪ ನಿರ್ದೇಶಕಿ ವಿನುತ, ತೋಟಗಾರಿಕೆ ಉಪ ನಿರ್ದೇಶಕ ಗುಣವಂತ, ಜಿಲ್ಲಾ ನಗರಾಭಿವೃಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು,  ಜಿಲ್ಲೆಯ ನಾಲ್ಕು ತಾಲೂಕುಗಳ ತಹಶಿಲ್ದಾರ್‌ಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ-ನಗರಸಭೆಯ ಮುಖ್ಯಾಧಿಕಾರಿಗಳು, ಪೌರಾಯುಕ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

8 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

10 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

11 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

18 hours ago