ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ‌ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದರು.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ

Ramesh Babu

Journalist

Recent Posts

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

47 minutes ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

1 hour ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

5 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

16 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

17 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

1 day ago