ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ ಇರಬೇಕು. ಇದರಿಂದ ವಯೋವೃದ್ಧರು, ಮಕ್ಕಳು, ಮಹಿಳೆಯರಿಗೆ ಉಪಯುಕ್ತವಾಗುತ್ತದೆ ಎಂದು ಡಾ. ಜ್ಞಾನೇಶ್ವರಿ ಹೇಳಿದರು.

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಇಂದು (ಏ.5ರ ಭಾನುವಾರ) ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ. ಕೃಷಿ ಕೆಲಸದ ನಡುವೆ ವೈಯಕ್ತಿಕ ಆರೋಗ್ಯ ತಪಾಸಣೆ ಮೂಲಕ ನೆಮ್ಮದಿಯ ಜೀವನ ಸಾಗಿಸಬೇಕು ಎಂದರು.

ಎಲ್ಲರೂ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಲೇಬೇಕು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಬಡವರು, ಮಧ್ಯಮ ವರ್ಗದವರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ನಂತರ ಮುಖಂಡರು ಮಾತನಾಡಿ, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಲೇಸು. ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಸಾಮಾನ್ಯ ಜನರು ದೂರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಾಗದ ಸ್ಥಿತಿಯಲ್ಲಿದ್ದು, ಇಂತಹ ಆರೋಗ್ಯ ತಪಾಸಣಾ ಶಿಬಿರಗಳಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಲು ಸಾಧ್ಯ ಎಂದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ. ಜ್ಞಾನೇಶ್ವರಿ ಮತ್ತು ಡಾಕ್ಟರ್ ಜಯಕುಮಾರ್ ಅವರು ನೆರವೇರಿಸಿಕೊಟ್ಟರು.

ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ಮಂಜುನಾಥ್ ನಾಗೇನಹಳ್ಳಿ, ಎಸ್ ಮಂಜುನಾಥ್ ಮೇಲೆಕೋಟೆ ಕ್ರಾಸ್, ಶ್ರೀನಿವಾಸ್ ಗೊಲ್ಲಹಳ್ಳಿ, ತೂಬಗೆರೆ ಹೋಬಳಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 hour ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

3 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

14 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

14 hours ago