ತೂಬಗೆರೆಯಲ್ಲಿ ಅದ್ಧೂರಿಯಾಗಿ ನಡೆದ ಸುಪ್ರಸಿದ್ಧ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿಂದು 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ವಿಜೃಂಭಣೆಯಿಂದ ನಡೆಯಿತು.

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲಾಯಿತು.

ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸಿದಾಗ ಇವರ ಹಸಿವು ತಣಿಸುವ ಕೆಲಸ ಮಾಡಲಾಯಿತು. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದೆವ್ವ ಪೀಡೆ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಸಹ ಇದೆ.

ಭೂತ ನೆರಿಗೆ ಹಿನ್ನೆಲೆ

ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.
ಸುಮಾರು 600 ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ.

ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ.

ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ.

ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ. ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ.

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

1 hour ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

5 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

6 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

6 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

10 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

21 hours ago