ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.

ಹಿಂದೂ-ಮುಸ್ಲಿಂ ಬಾಂಧವ್ಯದ ಸಂಕೇತವಾಗಿ, ಹಿಂದೂಗಳು ಮುಸ್ಲಿಮರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ ಬಳಿಕ, ಒಂದು ವಾರದ ಹಿಂದೆ ನಿರ್ಮಿತವಾದ ಗುಂಡಿಯಲ್ಲಿ ಕೊಂಡ ಹಾಕಲಾಯಿತು. ಹಲವು ವರ್ಷಗಳಿಂದ ಈ ಹಬ್ಬ ಆಚರಿಸುತ್ತಿರುವ ಬಾಬಯ್ಯ ವಂಶಸ್ಥ ಭಾಷಾ ನೇತೃತ್ವದಲ್ಲಿ ಹಸೇನ್-ಹುಸೇನ್ ದೇವರ ಹಸ್ತಗಳನ್ನು ಹೊತ್ತು, ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಗ್ರಾಮದ ಮಧ್ಯದಲ್ಲಿರುವ ಚಾವಡಿ ಬಳಿ ಕರೆತರಲಾಯಿತು. ಅನೇಕರು ಹರಕೆ ಹೊತ್ತು ಅಗ್ನಿಕುಂಡ ಹಾಯಿವುದರಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾತಿ-ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ, ಗ್ರಾಮದ ಹಿರಿಯರಾದ ಕೃಷ್ಣಪ್ಪ ಮಾತನಾಡುತ್ತಾ, “ನಮ್ಮ ತಾತಮುತ್ತಾತನ ಕಾಲದಿಂದಲೂ ಈ ಹಬ್ಬವನ್ನು ಹಿಂದೂಗಳು-ಮುಸ್ಲಿಂ ಸಹೋದರತ್ವದ ಸಂಕೇತವಾಗಿ ಆಚರಿಸುತ್ತಿದ್ದಾರೆ. ಯಾವುದೇ ರೋಗ-ರುಜಿನಗಳು ಗ್ರಾಮದಲ್ಲಿ ಹರಡದಿರಲಿ, ಗ್ರಾಮಕ್ಕೆ ಒಳ್ಳೆಯದುಂಟಾಗಲಿ ಎಂಬ ಉದ್ದೇಶದಿಂದ ಈ ಹಬ್ಬವನ್ನು ಪ್ರತಿವರ್ಷ ಆಚರಿಸುತ್ತೇವೆ,” ಎಂದು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, “ನಮ್ಮ ಹಿರಿಯರು ಬಾಬಯ್ಯನ ಹಬ್ಬವನ್ನು ಸೌಹಾರ್ದದ ಸಂಕೇತವಾಗಿ ಆಚರಿಸುತ್ತಾ ಬಂದಿದ್ದಾರೆ. ಗ್ರಾಮದಲ್ಲಿ ಮತಭೇದವಿಲ್ಲದೆ ಎಲ್ಲ ಧರ್ಮ ಹಾಗೂ ಜಾತಿಯವರು ಶಾಂತಿ ಮತ್ತು ಸೌಹಾರ್ದದಿಂದ ಭಾಗವಹಿಸಿದ್ದು, ಇದು ನಮ್ಮ ಬಹುಸಂಸ್ಕೃತಿಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.

ಈ ಹಬ್ಬದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಮಾಜಿ ಸದಸ್ಯ ದೇವೇಂದ್ರಪ್ಪ, ಮುಖಂಡರಾದ ಹುಸೇನ್, ರವಿ, ಅಸ್ಲಾಂ, ಯುವ ಮುಖಂಡರಾದ ಉದಯ ಆರಾಧ್ಯ, ಮಧು ಮತ್ತು ಇತರರು ಹಾಜರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

11 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

11 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

12 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

12 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

15 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

18 hours ago