ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯಿತು. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಗಣೇಶ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ ಸಾಂಸ್ಕೃತಿಕ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಯಿತು.
ಅಂತಿಮ ದಿನವಾದ ಇಂದು ಸೆಪ್ಟೆಂಬರ್ 1, ಸೋಮವಾರ 2025ರಂದು ಮಧ್ಯಾಹ್ನದಿಂದ ಸಂಜೆವರೆಗೆ ಆನೆ ಅಂಬಾರಿ ಮೆರವಣಿಗೆ ಹಾಗೂ ಭವ್ಯ ವಿಸರ್ಜನೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ, ನಾದಸ್ವರ, ಕಲಾ ತಂಡಗಳು ಭಕ್ತರನ್ನು ಮನರಂಜಿಸಿದವು.
ತೂಬಗೆರೆ ಪ್ರಮುಖ ಬೀದಿಗಳಲ್ಲಿ ಗಜ ಗಾಂಭೀರ್ಯದಿಂದ ನಡೆದ ಲಕ್ಷ್ಮಿ ಹೆಸರಿನ ಆನೆ. ಗಣೇಶಹೊತ್ತ ಆನೆ ನಡಿಗೆಗೆ ಫುಲ್ ಫಿದಾ ಆದ ಜನ. ಮೈಸೂರು ದಸಾರ ಆನೆ ಅಂಬಾರಿಯಂತೆ ಹೋಲುವ ಗಣೇಶನ ಮೆರವಣೆಗೆ ಅದ್ದೂರಿಯಾಗಿ ನಡೆಯಿತು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ), ಚಾವಡಿ ಅಧ್ಯಕ್ಷ ಮಧು, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ದೇವನಹಳ್ಳಿ ಬಿಜೆಪಿ ಅಧ್ಯಕ್ಷ ಅಂಬೀಶ್ ಗೌಡ, ಬಿಜೆಪಿ ಮುಖಂಡ ಪ್ರತಾಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು….
ಸ್ಥಳದಲ್ಲಿ ಡಿವೈಎಸ್ ಪಿ ರವಿ.ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು… ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…