ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಹೋಬಳಿಯಾದ್ಯಾಂತ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಂತ್ರಾಕ್ಷತೆ ಹೊತ್ತ ರಾಮಭಕ್ತರು ರಾಮನಾಮ ಭಜನೆ ಮಾಡುವ ಮೂಲಕ ಭಕ್ತಿ ಮೆರೆದರು.
ತೂಬಗೆರೆ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಭಾವಚಿತ್ರವನ್ನು ಸಾರೋಟದಲ್ಲಿ ಇರಿಸಿ ಮೆರವಣಿಗೆ ಆರಂಭಿಸಲಾಯಿತು. ರಾಮನ ಮಂತ್ರಾಕ್ಷತೆಗೆ ಸಾರ್ವಜನಿಕರು ಹೂವು ಚೆಲ್ಲಿದರು. ಕೇಸರಿ ಶಾಲುಗಳು ರ‌್ಯಾಲಿಯಲ್ಲಿ ಗಮನ ಸೆಳೆದವು. ಮೆರವಣಿಗೆ ದೊಡ್ಡಬಳ್ಳಾಪುರ ದಿಂದ ಕಂಟನಕುಂಟೆ, ತಿರಮಗೊಂಡನಹಳ್ಳಿ, ಹಾಡೋನಹಳ್ಳಿ ಮುಖಾಂತರ ಸಾಗಿ ತೂಬಗೆರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಮುಕ್ತಾಯಗೊಂಡಿತು.
ಈ ಮೆರವಣಿಗೆ ಕಾರ್ಯಕ್ರಮದಲ್ಲಿ ವಕೀಲ, ಬಿಜಪಿ ಮುಖಂಡ ಪ್ರತಾಪ್ ಭಾಗವಹಿಸಿ ಮಾತನಾಡಿದ ಅವರು, ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ದೇಶದ ಪ್ರತಿ ಮನೆ ಮನೆಗೂ ಮಂತ್ರಾಕ್ಷತೆಯನ್ನು ತಲುಪಿಸುವಂತ ಕಾರ್ಯ ಮಾಡಲಾಗುವುದು. ದೇಶದ ಜನತೆಗೆ ಭಗವಂತನ ಆಶೀರ್ವಾದ ತಲುಪಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತೇವೆ ಎಂದರು.
ನಂತರ ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪ ಮಾತನಾಡಿ, ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯ ರ ಕನಸಾಗಿತ್ತು. ಅದು ಈಗ ನನಸಾಗುತ್ತಿದೆ. ಈ ಮೂಲಕ ಭಾರತ ಮತ್ತೆ ವಿಶ್ವಗುರು ಆಗುವ ಭರವಸೆ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಸಮಸ್ತ ರಾಮಭಕ್ತರಿಂದ ಮಂದಿರ ನಿರ್ಮಾಣವಾಗುತ್ತಿದೆ.ಧರ್ಮಾತೀತವಾಗಿ, ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ದೇಶದ ಏಕತೆ ಸಾರುವ ಒಂದು ಶುಭ ಸಂದರ್ಭ ಇದಾಗಿದೆ. ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಎಲ್ಲ ಮನೆ, ಮನ ತುಂಬಲಿ ಎಂದು ಹಾರೈಸಿದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…