ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.

ಗ್ರಾಮದ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ತೂಬಗೆರೆ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ, ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು.

ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, ತಮ್ಮ ಭಕ್ತಿಯಿಂದ ಶ್ರೀ ಕೃಷ್ಣನನ್ನು ಒಲಿಸಿಕೊಂಡಿದ್ದು ಇತಿಹಾಸ. ದಾಸರ ಬದುಕಿನ ಹೆಜ್ಜೆ ಗುರುತುಗಳೇ ನಮಗೆ ಮಾರ್ಗದರ್ಶನವಾಗಿದ್ದು, ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿದೀಪ ಎಂದರು.

ಕನಕದಾಸರು, ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ತನ್ನ ಕೃತಿಗಳ ಮೂಲಕ  ಧಾರ್ಮಿಕ ಆಚರಣೆಗಳಲ್ಲಿದ್ದ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳು. ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ, ಕೆಪಿಸಿಸಿ ಸದಸ್ಯರಾದ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಸದಸ್ಯರುಗಳಾದ ಮುನಿಕೃಷ್ಣಪ್ಪ, ನಾಗೇಶ್, ಗಂಗಾಧರ ಕುರುಬ ಸಮಾಜದ ಮುಖಂಡರಾದ ದೇವೇಂದ್ರ ಸ್ವಾಮಿ, ಕಿಟ್ಟಿ, ಕೇಬಲ್ ಮಂಜು, ಸುನೀಲ್, ಯುವ ಮುಖಂಡ ಉದಯ ಆರಾಧ್ಯ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್  ಊರಿನ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

8 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

18 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago