ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.
ವಾದ್ಯ-ಮೇಳದೊಂದಿಗೆ ಆರತಿಗಳನ್ನು ಹಿಡಿದ ಮಹಿಳೆಯರು ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವಣ್ಣನವರಿಗೆ ಗೌರವ ಅರ್ಪಿಸಿದರು.
ನೂರಾರು ಭಕ್ತರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು.
ವಿಶೇಷ ಪೂಜಾ ಕಾರ್ಯಕ್ರಮಗಳು ನಂತರ ಸಂಜೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಸಲಾಯಿತು. ಮಹಿಳಾ ವೀರಗಾಸೆ ಸೇರಿದಂತೆ ಅನೇಕ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಉದಯ ಆರಾಧ್ಯ, ಭದ್ರಣ್ಣ, ಸೋಮಣ್ಣ, ಬೇಕರಿ ಬಸವರಾಜ್, ಗಂಗಾಧರಪ್ಪ, ರೇಣುಕಾರಾಧ್ಯ, ಚಂದ್ರು, ಮಹೇಶ್ , ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಗಂಗಾಧರ್, ವೈದ್ಯೆ ಸೌಮ್ಯ, ನಿವೃತ್ತ ಯೋಧ ಗೋಪಾಲ್, ಮುಂತಾದವರಿದ್ದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…