ತೂಬಗೆರೆ ಸರ್ಕಾರಿ ಕಾಲೇಜು ಹಾಗೂ ವಿವಿಧ ಶಾಲೆ ಮತ್ತು ಕಚೇರಿಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಯಿತು.
ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಅರವಿಂದ್, ಕೆಪಿಸಿಸಿ ಸದಸ್ಯ ಮುನಿರಾಜು, ಹೋಬಳಿ ಹಿತರಕ್ಷಣ ಸಮಿತಿ ಅಧ್ಯಕ್ಷರಾದ ರವಿ ಸಿದ್ದಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್, ಹಿರಿಯ ಸದಸ್ಯರಾದ ಮುನಿಕೃಷ್ಣಪ್ಪ, ಕೃಷ್ಣಪ್ಪ ಮುಂತಾದವರು ಭಾಗಿಯಾಗಿದ್ದರು.
ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸತ್ಯನಾರಾಯಣಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಕಡಿಮೆ ಮಾಡಿ ,ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಲಾ ಮತ್ತು ಕಾಲೇಜು ಮಕ್ಕಳು ಬ್ಯಾಂಡ್ಸೆಟ್ ವಾದ್ಯದೊಂದಿಗೆ ಮೆರವಣಿಗೆ ನಡೆಸಿದರು.
ಉಳಿದಂತೆ ಸರ್ಕಾರಿ ಆರೋಗ್ಯ ಕೇಂದ್ರ, ನಾಡಕಚೇರಿ, ಪಶು ಆರೋಗ್ಯ ಕೇಂದ್ರ, ಹಾಲು ಉತ್ಪಾದಕ ಸಹಕಾರ ಸಂಘ, ತೂಬಗೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘ ಸೇರಿದಂತೆ ವಿವಿಧ ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…